Alvas Nudisiri

ನೋಂದಣಿ
ಆಮಂತ್ರಣ
ಸ್ಥಳ
ಗ್ಯಾಲರಿ
ಸಂಪರ್ಕ
ಆಳ್ವಾಸ್ ನುಡಿಸಿರಿ > ಮಾಧ್ಯಮ > ಪ್ರಕಟಣೆ > ಆಳ್ವಾಸ್ ನುಡಿಸಿರಿ – 2017

ಆಳ್ವಾಸ್ ನುಡಿಸಿರಿ – 2017

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ ಆಶ್ರಯದಲ್ಲಿ ನಡೆಯುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ಯು ತನ್ನ ಹದಿನಾಲ್ಕನೇ ವರ್ಷದ ಸಮ್ಮೇಳನವನ್ನು ದಶಂಬರ ತಿಂಗಳ 1, 2 ಮತ್ತು 3ನೇ ದಿನಾಂಕಗಳಂದು ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಿದೆ. ದಶಂಬರ 01 ಶುಕ್ರವಾರ ಬೆಳಿಗ್ಗೆ ಸಮ್ಮೇಳನವು ಉದ್ಘಾಟನೆಗೊಳ್ಳಲಿದ್ದು, ದಶಂಬರ 03ನೇ ತಾರೀಕು ಆದಿತ್ಯವಾರ ಅಪರಾಹ್ನ ಸಮ್ಮೇಳನವು ಸಂಪನ್ನಗೊಳ್ಳಲಿದೆ. ಸಮ್ಮೇಳನದ ರೂಪುರೇಖೆಗಳ ಕುರಿತು ಚರ್ಚೆಗಳು ನಡೆಯುತ್ತಿದ್ದು ಶೀಘ್ರವಾಗಿ ಅಂತಿಮ ಸ್ಪರ್ಷನೀಡಲಾಗುವುದು. ಅರ್ಥವತ್ತಾಗುವಂತೆ ಹಾಗೂ ಆಕರ್ಷಕವಾಗುವಂತೆ ಸಮ್ಮೇಳನವನ್ನು ಆಯೋಜಿಸಲಾಗುವುದು. ಎಂದಿನಂತೆ ಈ ವರ್ಷವೂ ರತ್ನಾಕರವರ್ಣಿ ವೇದಿಕೆ ನುಡಿಸಿರಿ ಸಭಾಂಗಣದಲ್ಲಿ ಸಮ್ಮೇಳನವು ಜರಗಲಿದೆ. ಪ್ರತಿನಿಧಿಯಾಗಬಯಸುವ ಕನ್ನಡಾಭಿಮಾನಿಗಳು 100/- ರೂ. ಪ್ರತಿನಿಧಿ ಶುಲ್ಕ ನೀಡಿ ಸದಸ್ಯರಾಗಬಹುದು. ವಿದ್ಯಾರ್ಥಿಗಳಿಗೆ ಸಮ್ಮೇಳನದಲ್ಲಿ ಉಚಿತ ಪ್ರವೇಶವಿದೆ. ಸಮ್ಮೇಳನದ ಯಶಸ್ಸಿಗಾಗಿ ಸಿದ್ಧತೆಗಳು ನಡೆಯುತ್ತಿದ್ದು ಕನ್ನಡ ನಾಡು-ನುಡಿ-ಸಂಸ್ಕೃತಿ ಪ್ರಿಯ ಕನ್ನಡ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ‘ಆಳ್ವಾಸ್ ನುಡಿಸಿರಿ 2017’ನ್ನು ಯಶಸ್ವಿಗೊಳಿಸಬೇಕಾಗಿ ಕೇಳಿಕೊಳ್ಳುತ್ತೇನೆ.

ಸಂಪರ್ಕಕ್ಕಾಗಿ : 08258-261229, Email : nudisiri@alvas.org

ಡಾ| ಎಂ.ಮೋಹನ ಆಳ್ವ,
ಅಧ್ಯಕ್ಷರು,
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.)
ಮೂಡುಬಿದಿರೆ – 574227.