Alvas Nudisiri

ನೋಂದಣಿ
ಆಮಂತ್ರಣ
ಸ್ಥಳ
ಗ್ಯಾಲರಿ
ಸಂಪರ್ಕ
ಆಳ್ವಾಸ್ ನುಡಿಸಿರಿ > Uncategorized > ಆಳ್ವಾಸ್ ನುಡಿಸಿರಿ 2015 ಆಳ್ವಾಸ್ ನುಡಿಸಿರಿ ಪ್ರಶಸ್ತಿ ಪ್ರದಾನ

ಆಳ್ವಾಸ್ ನುಡಿಸಿರಿ 2015 ಆಳ್ವಾಸ್ ನುಡಿಸಿರಿ ಪ್ರಶಸ್ತಿ ಪ್ರದಾನ

ಹೊನ್ನಪ್ಪಚಾರ್

ಶ್ರೀಯುತ ಹೊನ್ನಪ್ಪಚಾರ್ ಅವರು ವೃತ್ತಿಯಲ್ಲಿ ಲೋಹಶಿಲ್ಪಯಾದರೂ ಪರಿಸರದ ಬಗ್ಗೆ ಅಪಾರ ಕಾಳಜಿಯನ್ನು ಹೊಂದಿದ್ದು ತಮ್ಮ ಕುಟುಂಬದವರ ಹುಟ್ಟುಹಬ್ಬದ ಸಂದರ್ಭದಲ್ಲಿ, ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ತಮ್ಮ ಗೆಳೆಯರೊಡಗೂಡಿ ಗಿಡ ನೆಡುವ ಕಾರ್ಯಕ್ರಮದ ಜೊತೆಗೆ ತಮ್ಮ ಓಕಳೀಪುರಂ ಬಡಾವಣೆಯ ಸ್ವಚ್ಛತೆ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಾ ಬಂದಿದ್ದಾರೆ. ಜೊತೆಗೆ ಪ್ರತೀ ವರ್ಷ ಸಾರ್ವಜನಿಕರ ಹಿತಕ್ಕಾಗಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ ತಮ್ಮ ಸಾಮಾಜಿಕ ಕಳಕಳಿಯನ್ನು ಮೆರೆದಿದ್ದಾರೆ.
ಶ್ರೀಯುತ ಹೊನ್ನಪ್ಪಚಾರ್‍ರವರು ಬಾಲ್ಯದಿಂದಲೂ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಧರ್ಮಭೀರುಗಳಾಗಿ ಬೆಳೆದು ಬಂದಿದ್ದು ಮುಂದೆ ಇವರ ಧಾರ್ಮಿಕ ಮುಖಂಡತ್ವವನ್ನು ಗುರುತಿಸಿ ರಾಜ್ಯ ಸರ್ಕಾರ ಹಲವಾರು ಮುಜರಾಯಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರನ್ನಾಗಿ ನೇಮಕ ಮಾಡಿರುತ್ತದೆ. ಅಲ್ಲದೆ ಶ್ರೀ ಕ್ಷೇತ್ರ ಅರಕಲಗೂಡು ಅರೆಮಾದನಹಳ್ಳಿ ವಿಶ್ವಕರ್ಮಮಠದ ಕಾರ್ಯದರ್ಶಿಗಳಗಿ ಕಾರ್ಯನಿರ್ವಹಿಸಿರುವುದರ ಜೊತೆಗೆ ಬೆಂಗಳೂರಿನ ಪ್ರತಿಷ್ಠಿತ ಶ್ರೀ ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷರಾಗಿ ಪ್ರತಿವರ್ಷ ಅದ್ಧೂರಿಯಾಗಿ ವಿಶ್ವಕರ್ಮ ರಥೋತ್ಸವವನ್ನು ಆಚರಿಸಿಕೊಂಡು ಬಂದಿರುತ್ತಾರೆ.
ಓಕಳೀಪುರಂ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘದಲ್ಲಿ 2006ರಿಂದಲೂ ಕಾರ್ಯನಿರ್ವಹಿಸುತ್ತಾ ಬಂದಿದ್ದು ಸಂಘದ ಸರ್ವತೋಮುಖ ಅಭಿವೃದ್ಧಿಯ ಜೊತೆಗೆ ಅತಿ ಹೆಚ್ಚು ಕಾರ್ಯಶೀಲವಾಗಿರುವ ಸಂಘ ಎಂಬ ಪ್ರಶಂಸೆಗೆ ಪಾತ್ರರಾಗಲು ಪ್ರಮುಖ ಕಾರಣಕರ್ತೃರಲ್ಲಿ ಒಬ್ಬರಾಗಿದ್ದಾರೆ. ಈ ಸಂಘದ ಅಡಿಯಲ್ಲಿ ಸಾರ್ವಜನಿಕ ಗ್ರಂಥಾಲಯ ಸ್ಥಾಪನೆ, ಉಚಿತ ತರಬೇತಿಗಳ ಆಯೋಜನೆ, ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಣ ಸಹಾಯ, ಉಚಿತ ಸಮವಸ್ತ್ರ ಹಾಗೂ ಪುಸ್ತಕ ವಿತರಣೆ ಮುಂತಾದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿರುತ್ತಾರೆ.
ಕರ್ನಾಟಕ ಸರಕಾರದ ಶಿಲ್ಪಕಲಾ ಅಕಾಡೆಮಿಯ ಮತ್ತು ಜಕಣಾಚಾರಿ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಇವರು ವಿವಿಧ ಸಂಘ ಸಂಸ್ಥೆಗಳಿಂದ, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹಾಗೂ ವಿವಿಧ ಮಠಾಧೀಶರಿಂದ ಪ್ರಶಂಸಣಾ ಪತ್ರಗಳನ್ನು ಪಡೆದಿರುತ್ತಾರೆ.
ಸಾಮಾಜಿಕ ಕಾಳಜಿ ಮತ್ತು ಸೇವಾ ಮನೋಭಾವವನ್ನು ಒಳಗೊಂಡಂತೆ ಲೋಹಶಿಲ್ಪಕಲೆಯಲ್ಲಿ ಅನೇಕ ವರ್ಷಗಳಿಂದ ಸೇವೆಗೈದು ಸಲ್ಲಿಸಿರುವ ಅನುಪಮವಾದ ಸೇವೆಯನ್ನು ಪರಿಗಣಿಸಿ ಹೊನ್ನಪ್ಪಚಾರ್ ಅವರಿಗೆ 2015ರ ಆಳ್ವಾಸ್ ನುಡಿಸಿರಿ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತೀದ್ದೇವೆ.